ಮುಕ್ತಾಯ ಮಾಡು

    ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದಲ್ಲಿ ದಿನಾಂಕ 29.07.2024 ರಿಂದ 03.08.2024ರವರೆಗೆ ವಿಶೇಷ ಲೋಕ್ ಅದಾಲತ್ ಆಯೋಜಿಸಲಾಗಿದೆ

    ಪ್ರಕಟಿಸಿದ ದಿನಾಂಕ: ಲಭ್ಯವಿಲ್ಲ

    ಮಾನ್ಯ ಸರ್ವೋಚ್ಛ ನ್ಯಾಯಾಲಯವು ವಿಶೇಷ ಲೋಕ್ ಅದಾಲತ್ ಅನ್ನು ದಿನಾಂಕ 29.07.2024 ರಿಂದ 03.08.2024 ರವರೆಗೆ ನಡೆಸಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷಕಾರರುಗಳಿಗೆ ಎದುರುದಾರರ ಜೊತೆ ಪೂರ್ವಭಾವಿ ಲೋಕ್ ಅದಾಲತ್ ಅನ್ನು ನಡೆಸಲು ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಮಾಡಲಾಗಿರುತ್ತದೆ. ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರಗಳಲ್ಲಿ ಮತ್ತು ತಾಲ್ಲೂಕು ಕಾನೂನು ಸೇವೆ ಸಮಿತಿಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿರುತ್ತದೆ. ಎಲ್ಲಾ ಪಕ್ಷದಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಡೆಸುವ ಪೂರ್ವಭಾವಿ ಲೋಕ್ ಅದಾಲತ್ ನಲ್ಲಿ ಭಾಗವಹಿಸಲು ಅನುಕೂಲ ಮಾಡಲಾಗಿರುತ್ತದೆ. ಈ ವಿಶೇಷ ಲೋಕ್ ಅದಾಲತ್ತಿನಲ್ಲಿ ರಾಜೀ ಸಂಧಾನಕ್ಕೆ ಗುರುತಿಸಲಾದ ಪ್ರಕರಣಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಮತ್ತು ಕೆಳಗೆ ಲಗತ್ತಿಸಲಾದ ಕಡತದಲ್ಲೂ ಈ ಪಟ್ಟಿಯನ್ನು ಕಾಣಬಹುದಾಗಿದೆ. ಆದುದರಿಂದ ಸದರಿ ಪ್ರಕರಣಗಳಲ್ಲಿನ ಎಲ್ಲಾ ಪಕ್ಷಕಾರರುಗಳು ತಮ್ಮ ವಾಸಸ್ಥಳಗಳ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ತೆರೆಯಲಾಗಿರುವ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳಿಗೆ ಭೇಟಿ ಕೊಟ್ಟು ದಿನಾಂಕ 29.07.2024 ರಿಂದ 03.08.2024ರವರೆಗೆ ನಡೆಯುವ ವಿಶೇಷ ಲೋಕ್ ಅದಾಲತ್ತಿನಲ್ಲಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ.

    ಹೆಚ್ಚಿನ ಮಾಹಿತಿಗಾಹಗಿ ಇಲ್ಲಿ ಕ್ಲಿಕ್ ಮಾಡಿ