ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಶ್ರೀನಿವಾಸ ಹರೀಶ್ ಕುಮಾರ್
ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಶ್ರೀನಿವಾಸ್ ಹರೀಶ್ ಕುಮಾರ್ ರವರು ಜೂನ್ 16, 1963 ರಂದು ಜನಿಸಿದ್ದು, ಫೆಬ್ರವರಿ 11, 1987 ರಂದು ವಕೀಲರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದು ಸಿವಿಲ್ ವ್ಯಾಜ್ಯಗಳಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯ ಮತ್ತು ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ಮೇ 27, 2002 ರಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ನೇಮಕಗೊಂಡ ಶ್ರೀಯುತರು ತುಮಕೂರು ಜಿಲ್ಲೆಯಲ್ಲಿ ಮತ್ತು ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಬೀದರ್, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಕರ್ನಾಟಕ ನ್ಯಾಯಾಂಗ ಅಕಾಡೆಮಿ ಬೆಂಗಳೂರಿನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶ್ರೀಯುತರು ನವೆಂಬರ್ 14, 2016 ರಂದು ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡು ನವೆಂಬರ್ 3, 2018 ರಂದು ಕರ್ನಾಟಕ ಉಚ್ಛ ನ್ಯಾಯಾಲಯದ ಖಾಯಂ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.