ಮುಕ್ತಾಯ ಮಾಡು

    ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಪ್ರಸನ್ನ ಬಿ. ವರಾಳೆ

    ಗೌರವಾನ್ವಿತ ಶ್ರೀ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ
    • ಹುದ್ದೆ: ಕರ್ನಾಟಕದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರು ಮತ್ತು ನಗರ ಸಿವಿಲ್ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಾಧೀಶರು, ಬೆಂಗಳೂರು
    • ಕೊಠಡಿ ಸಂಖ್ಯೆ: 1

    ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಪ್ರಸನ್ನ ಬಿ. ವರಾಳೆ ರವರು 23 ಜೂನ್, 1962 ರಂದು ನಿಪ್ಪಾಣಿಯಲ್ಲಿ ಜನಿಸಿದ್ದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನು ಪದವಿ ಪಡೆದಿರುತ್ತಾರೆ. ಶ್ರೀಯುತರು 12 ಆಗಸ್ಟ್, 1985 ರಂದು ವಕೀಲರಾಗಿ ವೃತ್ತಿ ಪ್ರಾರಂಭಿಸಿ ವಕೀಲರಾದ ಶ್ರೀ.ಎಸ್.ಎನ್.ಲೋಯಾರವರ ಕಛೇರಿಯಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ವಿಭಾಗಗಳಲ್ಲಿ ಅಭ್ಯಾಸ ಮಾಡಿರುತ್ತಾರೆ. 1990 ರಿಂದ 1992 ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮಾನ್ಯರು ನಂತರ ಔರಂಗಾಬಾದಿನ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ, ಹೆಚ್ಚುವರಿ ಸರ್ಕಾರಿ ಅಭಿಯೋಜಕರಾಗಿ ಮತ್ತು ಯೂನಿಯನ್ ಆಫ್ ಇಂಡಿಯಾದ ಹೆಚ್ಚುವರಿ ಸ್ಥಾಯಿ ವಕೀಲರಾಗಿಯೂ ಸೇವೆ ಸಲ್ಲಿಸಿರುತ್ತಾರೆ. 18 ಜುಲೈ, 2008 ರಂದು ಬಾಂಬೆ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕಗೊಂಡ ಶ್ರೀಯುತರು 15 ಅಕ್ಟೋಬರ್, 2022 ರಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.