ಮುಕ್ತಾಯ ಮಾಡು

    ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಪಿ. ಎಸ್. ದಿನೇಶ್ ಕುಮಾರ್

    Hon'ble Mr. Justice P. S. Dinesh Kumar
    • ಹುದ್ದೆ: ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು ಮತ್ತು ಆಡಳಿತಾತ್ಮಕ ನ್ಯಾಯಾಧೀಶರು, ನಗರ ಸಿವಿಲ್ ನ್ಯಾಯಾಲಯ, ಬೆಂಗಳೂರು
    • ಕೊಠಡಿ ಸಂಖ್ಯೆ: 1

    ಗೌರವಾನ್ವಿತ ಶ್ರೀ. ನ್ಯಾಯಮೂರ್ತಿ ಪಿ. ಎಸ್. ದಿನೇಶ್ ಕುಮಾರ್ ಅವರು ಫೆಬ್ರವರಿ 25, 1962ರಂದು ಜನಿಸಿದರು. ಶ್ರೀಯುತರು ನ್ಯಾಷನಲ್ ಹೈಸ್ಕೂಲ್, ನ್ಯಾಷನಲ್ ಕಾಲೇಜು ಮತ್ತು ಬೆಂಗಳೂರಿನ BMS ಕಾಲೇಜಿನಲ್ಲಿ ತಮ್ಮ ವ್ಯಾಸಂಗವನ್ನು ಮುಗಿಸಿದರು. ಶ್ರೀಯುತರಿಗೆ ಪ್ರೌಢಶಾಲೆಯಲ್ಲಿ ನ್ಯಾಷನಲ್ ಮೆರಿಟ್ ಸ್ಕಾಲರ್ ಸರ್ಟಿಫಿಕೇಟ್ ನೀಡಲಾಗಿತ್ತು.

    ಶ್ರೀಯುತರು 1990 ರಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಶ್ರೀ. ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ಅವರ ಕಛೇರಿಯಲ್ಲಿ ತಮ್ಮ ವೃತ್ತಿ ಅಭ್ಯಾಸವನ್ನು ಪ್ರಾರಂಭಿಸಿದರು. ಮಾನ್ಯರನ್ನು 1998 ರಲ್ಲಿ ಕೇಂದ್ರ ಸರ್ಕಾರದ ಹೆಚ್ಚುವರಿ ಸ್ಥಾಯಿ ವಕೀಲರಾಗಿ ಮತ್ತು 2003 ರಲ್ಲಿ ಹಿರಿಯ ಸ್ಥಾಯಿ ವಕೀಲರಾಗಿ ನೇಮಿಸಲಾಯಿತು.

    ಶ್ರೀಯುತರು ಸಿ.ಬಿ.ಐ, ಬಿ.ಎಸ್.ಎನ್.ಎಲ್, ಯು.ಪಿ.ಎಸ್.ಸಿ, ಯು.ಜಿ.ಸಿ, ಎ.ಐ.ಸಿ.ಟಿ.ಇ, ಎನ್.ಸಿ.ಟಿ.ಇ ಮುಂತಾದ ಸಂಸ್ಥೆಗಳಿಗೆ ಹಿರಿಯ ಸ್ಥಾಯಿ ವಕೀಲರಾಗಿ ಸೇವೆ ಸಲ್ಲಿಸಿರುತ್ತಾರೆ.

    ಶ್ರೀಯುತರು ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ), ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮೊದಲಾದ ಸಂಸ್ಥೆಗಳಲ್ಲೂ ಸ್ಥಾಯಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ

    ಮಾನ್ಯರು ಮಧ್ಯಸ್ಥಿಕೆಯಲ್ಲಿ ಮಧ್ಯಸ್ಥಿಕೆದಾರರಾಗಿ ಮತ್ತು ತರಬೇತುದಾರರಾಗಿಯೂ ಕೆಲಸ ಮಾಡಿದ್ದಾರೆ. ಸಿಬಿಐ ನಿರ್ದೇಶಕರ ನೇಮಕಾತಿ, ಐಟಿಡಿಸಿ ಹೋಟೆಲ್‌ಗಳ ಹೂಡಿಕೆ, ಕೇಂದ್ರ ಹಣಕಾಸು ಸಚಿವರ ವಿರುದ್ಧ ಮಾನನಷ್ಟ ಮೊಕದ್ದಮೆ, ಮಾಜಿ ಕೇಂದ್ರ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ವಿರುದ್ಧದ ಪ್ರಕರಣಗಳು, ರಾಜ್ಯದ ಭಾಷಾ ನೀತಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಪ್ರಮುಖ ಪ್ರಕರಣಗಳಲ್ಲಿ ವಾದ ಮಂಡಿಸಿರುತ್ತಾರೆ ಮತ್ತು ದೇಶದ ಪ್ರತಿಷ್ಠಿತ ಕಾನೂನು ಅಧಿಕಾರಿಗಳೊಂದಿಗೆ ಕೆಲಸ ಮಾಡಿರುತ್ತಾರೆ.

    ಶ್ರೀಯುತರು ಜನವರಿ 2, 2015ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು ಮತ್ತು ಡಿಸೆಂಬರ್ 30, 2016ರಂದು ಖಾಯಂ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು. ಅವರು 25.01.2024 ರಿಂದ ಕರ್ನಾಟಕದ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.